
News · July 13, 2026
ಡಾ. ಕೊಳ್ಚಪ್ಪೆ ಗೋವಿಂದ ಭಟ್ ಅವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ
.....ಕರಾಡ ವಿಶ್ವ ಸಂಪಾದಕ ಬಳಗದ ಸದಸ್ಯರಾಗಿರುವ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಅವರಿಗೆ ಕರಾಡ ವಿಶ್ವದ ಹೃತ್ಪೂರ್ವಕ ಅಭಿನಂದನೆಗಳು....
ಕಾಸರಗೋಡು, ಜುಲೈ 12: ಸಾಹಿತಿ, ಸಾಹಿತ್ಯ ಪರಿಚಾರಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೊಳ್ಳಪ್ಪೆ ಗೋವಿಂದ ಭಟ್ ಅವರು ನಾಡೋಜ ಡಾ. ಕಯ್ಯಾರ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ- 2026 ಇದಕ್ಕೆ ಆಯ್ಕೆಯಾಗಿದ್ದಾರೆ.
ಜುಲೈ 26ರಂದು ಕಾಸರಗೋಡಿನಲ್ಲಿ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಸಮಾರಂಭದ ಅಂಗವಾಗಿ ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ ಎನ್ ವೆಂಕಟರಮಣ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ ವಾಮನ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Achievers
