
News · August 7, 2026
ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ ಪ್ರತಿಭಟನೆ
ಪ್ರತಿಭಟನೆಯಲ್ಲಿ ಕರಾಡ ಬ್ರಾಹ್ಮಣ ಸಮಾಜ (ರಿ) ಬೆಂಗಳೂರು ಸದಸ್ಯರು ಭಾಗವಹಿಸಿದ್ದರು.
ಬೆಂಗಳೂರು: 6 ಆಗಸ್ಟ್ 2026
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ.) ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿ, ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಸರ್ಕಾರವನ್ನು ಆಗ್ರಹಿಸಲಾಯಿತು.
ಸಮುದಾಯದ ಹಿರಿಯರು, ಮಹಿಳೆಯರು ಹಾಗೂ ಹಲವು ಜಿಲ್ಲೆಗಳ ಸಂಘಟನೆಗಳ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ, ಬ್ರಾಹ್ಮಣ ಸಮುದಾಯದ ಸೇವೆ, ವಿದ್ಯಾಭ್ಯಾಸ ಹಾಗೂ ಸಮಾಜಮುಖಿ ಕೊಡುಗೆಗಳನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರಾಡ ಬ್ರಾಹ್ಮಣ ಸಮಾಜ (ರಿ) ಬೆಂಗಳೂರು ಸದಸ್ಯರು ಭಾಗವಹಿಸಿದ್ದರು.

