
News · October 3, 2026
ಯೋಗಾಸನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀಶ ಎಸ್. ನವಿಲೇಕರ್ ಕೌರಿ
ಕರಾಡ ವಿಶ್ವದ ಅಭಿನಂದನೆಗಳು
ಕೊಪ್ಪದ ಜ್ಞಾನವಾಹಿನಿ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಶ್ರೀಶ ಎಸ್. ನವಿಲೇಕರ್ ಕೌರಿ ಅವರು ಚಿಕ್ಕಮಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಶ್ರೀಮತಿ ಸಾವಿತ್ರಿ ಮತ್ತು ಶ್ರೀ ಶಶಿಧರ್ ನವಿಲೇಕರ್ ಅವರ ಪುತ್ರಿಯಾದ ಶ್ರೀಶ ಎಸ್. ನವಿಲೇಕರ್ ಅವರು ತಮ್ಮ ಪ್ರತಿಭೆಯ ಮೂಲಕ ಕರಾಡ ಸಮಾಜಕ್ಕೆ ಕೀರ್ತಿ ತಂದಿದ್ದಾರೆ.
ಕರಾಡ ವಿಶ್ವದ ವತಿಯಿಂದ ಶ್ರೀಶ ಎಸ್. ನವಿಲೇಕರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ರಾಜ್ಯಮಟ್ಟದ ಸ್ಪರ್ಧೆಗೆ ಶುಭಹಾರೈಕೆಗಳು.

Achievers
